Home » ಸಮೀಕ್ಷೆಯಲ್ಲಿ ಪಾಲ್ಗೊಂಡ 1.3 ಲಕ್ಷ ಶಿಕ್ಷಕ, ಶಿಕ್ಷಕೇತರರಿಗೆ 5,000 ರೂ. ಬಿಡುಗಡೆ, ಬಿರುಸು ಪಡೆದುಕೊಂಡ ಗಣತಿ

ಸಮೀಕ್ಷೆಯಲ್ಲಿ ಪಾಲ್ಗೊಂಡ 1.3 ಲಕ್ಷ ಶಿಕ್ಷಕ, ಶಿಕ್ಷಕೇತರರಿಗೆ 5,000 ರೂ. ಬಿಡುಗಡೆ, ಬಿರುಸು ಪಡೆದುಕೊಂಡ ಗಣತಿ

0 comments

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೂಚನೆ ಪ್ರಕಾರ ನಡೆಯುತ್ತಿರುವ ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಮೊದಲನೇ ಕಂತಿನ ಗೌರವಧನ ತಲಾ ರೂ.5000/- ಗಳನ್ನ ವಿತರಿಸಲು ಆದೇಶ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ.60,36,40,000/- (ರೂಪಾಯಿ ಅರವತ್ತು ಕೋಟಿ ಮೂವತ್ತಾರು ಲಕ್ಷದ ನಲವತ್ತು ಸಾವಿರಗಳು) ಗಳನ್ನು ಬಿಡುಗಡೆ ಮಾಡಲು ಆದೇಶ ಹೊರಡಿಸಿದೆ. ಸಮೀಕ್ಷಾ ಉದ್ದೇಶಕ್ಕಾಗಿ ನಿಗಮಗಳಿಂದ ಆಯೋಗದ ಠೇವಣಿ ಖಾತೆಯಿಂದ ವರ್ಗಾವಣೆ ಮಾಡಿರುವ ಅನುದಾನದಿಂದ ಜಿಲ್ಲಾಧಿಕಾರಿಗಳ ಹೆಸರಿನಲ್ಲಿರುವ ಪಿ.ಡಿಖಾತೆ/ಬ್ಯಾಂಕ್ ಖಾತೆಗೆ ಈ ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶಿಸಿದೆ.

ಈ ಅನುದಾನವನ್ನು ಸಮೀಕ್ಷಾದಾರರಿಗೆ ತಲಾ ರೂ.5,000 ರಂತೆ ಮೊದಲನೇ ಕಂತಿನ ಗೌರವಧನ ನೀಡಲು ಬಳಕೆ ಮಾಡುವುದು. ಉಳಿದ ಅನುದಾನವನ್ನು ಮುಂದಿನ ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು ಎನ್ನುವ ಮಾಹಿತಿ ಬಂದಿದೆ.
ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚವನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ. ದಯಾನಂದ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:Crime News: ಅಪ್ಪನ ಜೇಬಿನಿಂದ ಹಣ ಕದ್ದಿದ್ದಕ್ಕೆ ಮಗಳ ಕೊಲೆ

You may also like