7
Karnataka: ರಾಜ್ಯ (Karnataka) ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ, ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಒಂದು ಬಾರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳಂತೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ;LPG: ‘LPG ಸಿಲಿಂಡರ್’ ಡೆಲಿವರಿಗೆ ಹೆಚ್ಚಿನ ಹಣ ಕೇಳಿದ್ರೆ ಸಂಖ್ಯೆಗೆ ದೂರು ನೀಡಿ
ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಕ್ರಮವಾಗಿ 3 ವರ್ಷಗಳಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
