Home » Caste Survey : ಜಾತಿ ಗಣತಿ ಅವಧಿ ವಿಸ್ತರಣೆ? ಗೃಹ ಸಚಿವ ಪರಮೇಶ್ವರ ಮಹತ್ವದ ಹೇಳಿಕೆ

Caste Survey : ಜಾತಿ ಗಣತಿ ಅವಧಿ ವಿಸ್ತರಣೆ? ಗೃಹ ಸಚಿವ ಪರಮೇಶ್ವರ ಮಹತ್ವದ ಹೇಳಿಕೆ

0 comments

Caste Survey : ರಾಜ್ಯದಲ್ಲಿ ಭಾರೀ ವಿರೋಧಗಳ ನಡುವಿನ ನಡೆಯುತ್ತಿರುವ ಜಾತಿ ಸಮೀಕ್ಷೆಗೆ ಮತ್ತೆ ಅವಧಿ ವಿಸ್ತರಿಸುವ ಕುರಿತು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಹೌದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶೇ. 80 ರಷ್ಟು ಮುಗಿದಿದ್ದು ಬಾಕಿ ಸಮೀಕ್ಷೆಗಾಗಿ ಇನ್ನೂ ಮೂರ್ನಾಲ್ಕು ದಿನ ಅವಧಿ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಇದನ್ನೂ ಓದಿ;Supreme court: ಸನಾತನ ಧರ್ಮಕ್ಕೆ ಅವಮಾನ? ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನ

ಅಲ್ಲದೆ ರಾಜ್ಯದ ಸರಾಸರಿ ಪರಿಗಣಿಸುವುದಾದರೆ ಶೇ.20 ರಿಂದ 25ರಷ್ಟು ಬಾಕಿಯಿರುವ ಸಾಧ್ಯತೆ ಇದೆ. ನಾಳೆ ಅ. 7ಕ್ಕೆ ಸಮೀಕ್ಷೆ ಪೂರ್ಣಗೊಳಿಸಲು ಗಡುವು ನಿಗದಿ ಪಡಿಸಲಾಗಿದ್ದು, ಅದು ನಾಳೆಗೆ ಮುಗಿಯುತ್ತಿದೆ. ಇನ್ನೂ ನಾಲ್ಕು ದಿನ ಅವಧಿ ವಿಸ್ತರಣೆ ಮಾಡಿದರೆ, ಸಮೀಕ್ಷೆ ಬಹುತೇಕ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೊಪ್ಪಳ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಸಂಜೆ ವೇಳೆಗೆ ವಾಪಸ್‌‍ ಬರಲಿದ್ದು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಜಿಲ್ಲಾವಾರು ಮಾಹಿತಿ ಪಡೆದು ಅವಧಿ ವಿಸ್ತರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.

You may also like