Home » School Holiday: ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ವಿಸ್ತರಣೆ, ಎಲ್ಲಿಯವರೆಗೆ?

School Holiday: ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ವಿಸ್ತರಣೆ, ಎಲ್ಲಿಯವರೆಗೆ?

0 comments

School Holiday: ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆ ದಿನ ಆಗಿದ್ದು, ಆದರೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್‌ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿರುವ ಕುರಿತು ಸಿಎಂ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್‌ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ತೀರ್ಮಾನ ಮಾಡಲಾಗಿದೆ.

ಅ.18 ರವರೆಗೆ ಎಲ್ಲಾ ಶಾಲೆಗಳಿಗೆ (ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ) ರಜೆ ವಿಸ್ತರಣೆ ಮಾಡಲಾಗುವುದು ಎಂದು ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಹೇಳಿದ್ದಾರೆ.

ಶಿಕ್ಷಕರ ಸಂಘ ಈಗಾಗಲೇ ರಜೆ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿತ್ತು. ಮನವಿ ಆಧರಿಸಿ ಅ.18 ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ಪೂರ್ಣ ಕೆಲಸ ಆಗಬೇಕಾದರೆ ರಜೆ ವಿಸ್ತರಿಸುವಂತೆ ಕೇಳಿದ್ದಾರೆ. ಹಾಗಾಗಿ ನಾಳೆಯಿಂದ ಅಕ್ಟೋಬರ್‌ 18 ರವರೆಗೆ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ:Cricket: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಏಕದಿನದಿಂದ ನಿವೃತ್ತಿಯಾಗುತ್ತಾರಾ? : ಬಿಸಿಸಿಐ 2027ರ ವಿಶ್ವಕಪ್‌ಗೆ ಕೋಕ್‌ ಕೊಡುತ್ತಾ?

ಪಿಯುಸಿ ಉಪನ್ಯಾಸಕರು ಈ ಸಮೀಕ್ಷೆಯಲ್ಲಿ ಭಾಗಿಯಾಗುವಂತಿಲ್ಲ ಎಂದು ಮಾಹಿತಿ ನೀಡಲಾಗಿದೆ. ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರಿಗೆ ಸಮೀಕ್ಷಾ ಕಾರ್ಯದಿಂದ ವಿನಾಯಿತಿ ನೀಡಲಾಗಿದೆ. ಉಳಿದ ಶಿಕ್ಷಕರು ರಜೆ ಅವಧಿಯಲ್ಲೂ ಸಮೀಕ್ಷೆ ಕಾರ್ಯವನ್ನು ಮಾಡಲಿದ್ದಾರೆ.

You may also like