Home » Rakrsh Kishor: ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣ – ವಕೀಲರ ಹೇಳಿಕೆ ಕೇಳಿದರೆ ಶಾಕ್ ಆಗ್ತೀರಾ

Rakrsh Kishor: ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣ – ವಕೀಲರ ಹೇಳಿಕೆ ಕೇಳಿದರೆ ಶಾಕ್ ಆಗ್ತೀರಾ

0 comments

Rakrsh Kishor: ಕೋರ್ಟ್ ಕಲಾಪದ ವೇಳೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಬಿರ್.ಆರ್. ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಆಘಾತಕಾರಿ ಘಟನೆ ನಿನ್ನೆ ನಡೆದಿದ್ದು, ನಂತರ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರನ್ನು ಅಭ್ಯಾಸದಿಂದ ಬಾರ್ ಕೌನ್ಸಿಲ್ ಆಫ್ ಇಂಡಿಯಾ ವಜಾಗೊಳಿಸಿದೆ. ಇದರ ಬೆನ್ನಲ್ಲೇ ವಕೀಲ ರಾಕೇಶ್ ಕಿಶೋರ್ ಹೇಳಿಕೆ ನೀಡಿ ಎಲ್ಲರೂ ಶಾಕ್ ಆಗುವಂತೆ ಮಾಡಿದ್ದಾರೆ.

ಹೌದು, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಕೇಶ್ ಕಿಶೋರ್ ಅವರು ಮೊದಲ ಪ್ರತಿಕ್ರಿಯೆ ಭಾರೀ ಅಚ್ಚರಿ ಮೂಡಿಸಿದೆ. ರಾಕೇಶ್‌ ಕಿಶೋರ್ (Rakesh Kishore) ಶೂ ಎಸೆದ ಬಗ್ಗೆ ತನ್ನನ್ನು ತಾನು ಸಮರ್ಥಿಸಿಕೊಂಡಿದ್ದು, ಶೂ ಎಸೆದಿದಕ್ಕೆ ನನಗೆ ಯಾವುದೇ ಪಶ್ಚಾತಾಪವಿಲ್ಲ, ದೇವರೆ ನನ್ನನ್ನು ಪ್ರಚೋದಿಸಿದ್ದು ಎಂದು ವಾಗ್ವಾದ ನಡೆಸಿದ್ದಾರೆ.

ಇದನ್ನೂ ಓದಿ:BBK 12: ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಸರಕಾರ: ಸ್ಪರ್ಧಿಗಳಿಗೆ 7 ಗಂಟೆಯೊಳಗೆ ಹೊರ ಹೋಗಲು ಸೂಚನೆ

ಅಲ್ಲದೆ ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ. ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.

You may also like