Home » Hasanambe: ಹಾಸನಾಂಬ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ – ಕಟ್ಟುನಿಟ್ಟಿನ ಜಾರಿಗೆ ಡಿಸಿ ಆದೇಶ

Hasanambe: ಹಾಸನಾಂಬ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ – ಕಟ್ಟುನಿಟ್ಟಿನ ಜಾರಿಗೆ ಡಿಸಿ ಆದೇಶ

0 comments

Hasanambe: ಶ್ರೀ ಹಾಸನಾಂಬ ದೇವಾಲಯಕ್ಕೆ ಆಗಮಿಸುವ ಭಕ್ತರು ಮತ್ತು ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲು ಆಗಮಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಸ್ತ್ರ ಸಂಹಿತೆಯನ್ನು ಚಾರಿಗೊಳಿಸಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು, ಈ ಬಗ್ಗೆ ಕಳೆದ ಸೆ. 19ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ವಸ್ತ್ರಸಂಹಿತೆಯ ಕಾರ. ಶ್ರೀ ಹಾಸನಾಂಬ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಂಯೋಜನ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ದೇವಾಲಯದ ಗರ್ಭಗುಡಿಗೆ ಪ್ರವೇಶಿಸಲು ಪುರುಷರು ಪಂಚೆ, ದೋತಿಯುತಹ ಅಥವಾ ಪೈಜಾಮದಂತಹ ಹಾಗೂ ಮಹಿಳೆಯರು ಸೀರೆ ಮತ್ತು ಚೂಡಿದಾರದಂತಹ ಸಾಂಪ್ರದಾಯಿಕ ಉಡುಗೆಗಳಲ್ಲಿ ಮಾತ್ರ ಅವಕಾಶ ಕಲ್ಪಿಸುವುದು. ಯಾವುದೇ ರೀತಿಯ ಕರ್ತವ್ಯ ನಿರತ ಸಿಬ್ಬಂದಿಗಳು ಸಮವಸ್ತ್ರ, ಸಹಿತವಾಗಿ ಗರ್ಭಗುಡಿ ಪ್ರವೇಶಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:Bigg Boss: ‘Bigg Boss’ ಶೋ ಬಂದ್‌: ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ; ರಕ್ಷಿತಾ ಹೇಳಿದ್ದ ಡೈಲಾಗ್‌ ವೈರಲ್‌!

You may also like