Home » ಎಡಮಂಗಲ : ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡಬಂದು ಅಪಘಾತ ,ಸಹ ಸವಾರ ಸಾವು

ಎಡಮಂಗಲ : ದ್ವಿಚಕ್ರ ವಾಹನಕ್ಕೆ ನಾಯಿ ಅಡ್ಡಬಂದು ಅಪಘಾತ ,ಸಹ ಸವಾರ ಸಾವು

by Praveen Chennavara
0 comments

ಸುಳ್ಯ : ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಮಂಗಲದಲ್ಲಿ ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಪರಿಣಾಮ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಸಹಸವಾರನಾಗಿದ್ದ ವ್ಯಕ್ಯಿಯೋರ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕಡಬ ತಾಲೂಕು ಎಡಮಂಗಲ ಗ್ರಾಮದ ಎಡಮಂಗಲ-ಚಾರ್ವಕ ರಸ್ತೆಯಲ್ಲಿ ಎಡಮಂಗಲ ಪೇಟೆಯಿಂದ ಕೊಳಂಬೆ ಎಂಬಲ್ಲಿಗೆ ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುವ ಕೇರಳ ಮೂಲದ ಸಂತೋಷ್ ಎಂಬವರು ಅವರ ಅಣ್ಣ ಸುರೇಶ್ ಎಂಬವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಹೀರೋ ಮೆಸ್ಟ್ರೋ ಸ್ಕೂಟರ್ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಸ್ಕೂಟರ್ ಸವಾರ ಸಂತೋಷ ಎಂಬವರ ಹತೋಟಿ ತಪ್ಪಿ ಮಗುಚಿ ಬಿದ್ದ ಪರಿಣಾಮ ಸ್ಕೂಟರ್ ನಲ್ಲಿ ಸಹ ಸವಾರ ಸುರೇಶ ( 53 ವರ್ಷ) ಎಂಬವರ ತಲೆಗೆ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆ. ಅ.ಕ್ರ 58/2021 ಕಲಂ 279, 304(ಎ) ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

You may also like

Leave a Comment