Home » ಸವಣೂರು : ನಾಪತ್ತೆಯಾದ ವ್ಯಕ್ತಿಯ ಶವ ನೀರಿನ ತೊಟ್ಟಿಯಲ್ಲಿ ಪತ್ತೆ

ಸವಣೂರು : ನಾಪತ್ತೆಯಾದ ವ್ಯಕ್ತಿಯ ಶವ ನೀರಿನ ತೊಟ್ಟಿಯಲ್ಲಿ ಪತ್ತೆ

by Praveen Chennavara
0 comments

ಸವಣೂರು :ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ.
ಮೃತಪಟ್ಟವರನ್ನು ಸವಣೂರು ಗ್ರಾಮದ ಉರುಸಾಗು ನಿವಾಸಿ ರಾಮಯ್ಯ ಪೂಜಾರಿ ಎಂದು ಗುರುತಿಸಲಾಗಿದೆ.

ರಾಮಯ್ಯ ಪೂಜಾರಿ ಅವರು ಎರಡು ದಿನಗಳ ಹಿಂದೆ ಸವಣೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಹಿಂತಿರುಗಿ ಬಾರದೇ ಇದ್ದು, ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸುತ್ತಿದ್ದಾಗ ನಿನ್ನೆ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ತನಿಖೆ ನಂತರವಷ್ಟೇ ತಿಳಿಯಬೇಕಿದೆ..

ಮೃತದೇಹವನ್ನು ಹಿಂದೂ ಜಾಗರಣ ವೇದಿಕೆ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮೃತರು ಹೆಂಡತಿ, ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

You may also like

Leave a Comment