Home » ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನಿಂದ ಹಾರಿದ ಕಾರು !!| ಇನ್ನೊಂದು ಬದಿ ಪಾರ್ಕ್ ಮಾಡಿದ್ದ ಕಾರಿಗೆ ಡಿಕ್ಕಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನಿಂದ ಹಾರಿದ ಕಾರು !!| ಇನ್ನೊಂದು ಬದಿ ಪಾರ್ಕ್ ಮಾಡಿದ್ದ ಕಾರಿಗೆ ಡಿಕ್ಕಿ

by ಹೊಸಕನ್ನಡ
0 comments

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು, ಇನ್ನೊಂದು ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯ ಕಲ್ಲಾರೆ ಕಾನಾವು ಕ್ಲಿನಿಕ್ ಬಳಿ ನಡೆದಿದೆ.

ದರ್ಬೆ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಇನ್ನೊಂದು ಬದಿಗೆ ಜಂಪ್ ಆಗಿ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದು, ಹಾಗಾಗಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

You may also like

Leave a Comment