Home » ರಾಜ್ಯದಲ್ಲಿ ಡಿಸೆಂಬರ್ 28 ರಿಂದ ಹತ್ತುದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ !! | ಹೊಸವರ್ಷ ಸಂಭ್ರಮಾಚರಣೆಗೆ ಬೀಳಲಿದೆ ಬ್ರೇಕ್

ರಾಜ್ಯದಲ್ಲಿ ಡಿಸೆಂಬರ್ 28 ರಿಂದ ಹತ್ತುದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ !! | ಹೊಸವರ್ಷ ಸಂಭ್ರಮಾಚರಣೆಗೆ ಬೀಳಲಿದೆ ಬ್ರೇಕ್

by ಹೊಸಕನ್ನಡ
0 comments

ರಾಜ್ಯದಲ್ಲಿ ಕೊರೋನಾ, ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಮುಖ್ಯಮಂತ್ರಿ ಅವರ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಇರಲಿದೆ. ಎಲ್ಲ ಸಂಭ್ರಮಾಚರಣೆ, ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ನಿಷೇಧವನ್ನು ಹೇರಲಾಗಿದೆ. ಪಬ್, ಬಾರ್, ರೇಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದಿದ್ದಾರೆ.

ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕಷ್ಟೆ ರಾತ್ರಿ 10 ಗಂಟೆಯ ನಂತರ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅದೆಲ್ಲದೆ, ನರೇಂದ್ರ ಮೋದಿ ಅವರು ಸೂಚನೆ ನೀಡಿದಂತೆ ರಾಜ್ಯದಲ್ಲಿಯೂ ಮಕ್ಕಳಿಗೆ ಲಕಸಿಕೆಯನ್ನು ನೀಡಲಾಗುತ್ತದೆ. ಆರಂಭಿಕ ಹಂತದಲ್ಲಿ ೧೫-೧೮ ವರ್ಷದ ಮಕ್ಕಳಿಗೆ ಲಸಿಕೆ ಯನ್ನು ನೀಡಲಾಗುತ್ತದೆ. ಜನವರಿ 3ನೇ ತಾರೀಕಿನಿಂದ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಲಾಗುತ್ತದೆ. ಇನ್ನು ೬೦ ವರ್ಷ ಮೇಲ್ಪಟ್ಟು ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೂಸ್ಟರ್‌ ಡೋಸ್‌ ನೀಡುವ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಜನವರಿ 10 ರಿಂದ ಬೂಸ್ಟರ್‌ ಡೋಸ್‌ ನೀಡಲಾಗುತ್ತದೆ ಎಂದಿದ್ದಾರೆ.

You may also like

Leave a Comment