Home » ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಎದುರು ಭಾಗದ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!!

ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಎದುರು ಭಾಗದ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!!

0 comments

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಕಂಬಳಕರೆಯ ಪಕ್ಕದಲ್ಲೇ ಇರುವ ಕೆರೆ ಬಳಿಯಲ್ಲಿ ಇಂದು ಚಪ್ಪಲಿ ಹಾಗೂ ಸ್ಕೂಟಿ ಪತ್ತೆಯಾಗಿದ್ದು, ವ್ಯಕ್ತಿಯೊರ್ವರು ಕೆರೆಗೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಪುತ್ತೂರು ದರ್ಬೆ ನಿವಾಸಿ, ಇಂಟೆರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು ಎಂದು ಗುರುತಿಸಲಾಗಿದೆ.ಮೃತದೇಹವನ್ನು ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಕೆರೆಯಿಂದ ಮೇಲಕ್ಕೆತ್ತಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

Leave a Comment