Home » ರಾಜ್ಯದಲ್ಲಿ 24 ಗಂಟೆಯಲ್ಲಿ 25 ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ 24 ಗಂಟೆಯಲ್ಲಿ 25 ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆ

by Praveen Chennavara
0 comments

ರಾಜ್ಯದಲ್ಲಿ ಒಮಿಕ್ರಾನ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 25,005 ಹೊಸ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಅತ್ಯಧಿಕ 18,374 ಹೊಸ ಪ್ರಕರಣ ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಸಚಿವರು, 2,363 ಸೋಂಕಿತರು ಗುಣಮುಖರಾಗಿದ್ದಾರೆ. ಬೆಂಗಳೂರು ಮೂವರು ಸೇರಿದಂತೆ ರಾಜ್ಯದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ. 12.39 ರಷ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಸದ್ಯ 1,15,733 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ 91 ಸಾವಿರ ಸಕ್ರಿಯ ಪ್ರಕರಣಗಳಿವೆ. ಇಂದು 2,01,704 ಕೊರೋನಾ ಪರೀಕ್ಷೆ ನಡೆಸಿರುವುದಾಗಿ ಸಚಿವರು ತಿಳಿಸಿದ್ದಾರೆ.

You may also like

Leave a Comment