Home » ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನ ಬರ್ಬರವಾಗಿ ಹತ್ಯೆ!! ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳ ಬಂಧನ

ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನ ಬರ್ಬರವಾಗಿ ಹತ್ಯೆ!! ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳ ಬಂಧನ

0 comments

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದ ಆಟೋ ಚಾಲಕನೋರ್ವನ ಬರ್ಬರ ಹತ್ಯೆಯ ಆರೋಪಿಗಳನ್ನು ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೂರ್ ಅಹ್ಮದ್ ಬುಡ್ಡೆಸಾಬ್ ನಾಯಿಕ್ ಹಾಗೂ ಸಮೀರ ರಫೀಕ್ ನಾಯಿಕ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಮೃತ ಆಟೋ ಚಾಲಕ ಶಿವಶಂಕರ ಬಡಾವಣೆಯ ನಿವಾಸಿ ಆಸೀಫ್ ಮೆಹಬೂಬ್ ಜಿನಾವರ್ ಎಂಬಾತನನ್ನು ಬರ್ಬರವಾಗಿ ಕೊಲೆ ನಡೆಸಲಾಗಿತ್ತು. ಪ್ರೇಮದ ಕಾರಣದಿಂದಾಗಿ ಕೊಲೆ ನಡೆಸಲಾಗಿದೆ ಎಂದು ಅನುಮಾನಿಸಲಾಗಿದ್ದು,ಪ್ರಾಥಮಿಕ ತನಿಖೆಯ ಬಳಿಕ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕೊಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

You may also like

Leave a Comment