Home » ದ.ಕ. : ಶಾಲೆಯಲ್ಲಿ 5 ಕ್ಕಿಂದ ಹೆಚ್ಚು ಪಾಸಿಟಿವ್ ಪ್ರಕರಣ ಇದ್ದರೆ ಆ ಶಾಲೆ ತಾತ್ಕಾಲಿಕ ಸ್ಥಗಿತ -ಜಿಲ್ಲಾಧಿಕಾರಿ ಸೂಚನೆ

ದ.ಕ. : ಶಾಲೆಯಲ್ಲಿ 5 ಕ್ಕಿಂದ ಹೆಚ್ಚು ಪಾಸಿಟಿವ್ ಪ್ರಕರಣ ಇದ್ದರೆ ಆ ಶಾಲೆ ತಾತ್ಕಾಲಿಕ ಸ್ಥಗಿತ -ಜಿಲ್ಲಾಧಿಕಾರಿ ಸೂಚನೆ

by Praveen Chennavara
0 comments

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸದ್ಯದ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದೆ. ಈ ಕಾರಣದಿಂದ ಯಾವ ಶಾಲೆಗಳಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚು ಕಂಡು ಬಂದಿದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಸಭೆಯಲ್ಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

You may also like

Leave a Comment