Home » ಬೆಳ್ಳಾರೆ: ಪ್ರಕರಣವೊಂದರ ವಿಚಾರಣೆಗೆ ಕರೆದು ವ್ಯಕ್ತಿಯೊಬ್ಬರಿಗೆ ಗಂಭೀರ ಹಲ್ಲೆ ಆರೋಪ!! ಬೆಳ್ಳಾರೆ ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಆಕ್ರೋಶ

ಬೆಳ್ಳಾರೆ: ಪ್ರಕರಣವೊಂದರ ವಿಚಾರಣೆಗೆ ಕರೆದು ವ್ಯಕ್ತಿಯೊಬ್ಬರಿಗೆ ಗಂಭೀರ ಹಲ್ಲೆ ಆರೋಪ!! ಬೆಳ್ಳಾರೆ ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಆಕ್ರೋಶ

0 comments

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಠಾಣೆಯ ಪೊಲೀಸರು ಪ್ರಕರಣವೊಂದರ ವಿಚಾರಣೆಗೆಂದು ಠಾಣೆಗೆ ಕರೆಸಿ,ವಿನಃ ಕಾರಣ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ.

ಸದ್ಯ ವ್ಯಕ್ತಿ ಮಾಡಿರುವ ವೀಡಿಯೋ ದಲ್ಲಿ ವ್ಯಕ್ತಿಯ ಮುಖವು ಹಲ್ಲೆಯಿಂದಾಗಿ ಊದಿಕೊಂಡಿದ್ದು, ಗಂಭೀರ ಸ್ವರೂಪದ ಹಲ್ಲೆಯ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದೂ,ಪೊಲೀಸರ ನಡೆಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ನಿಜಕ್ಕೂ ಪೊಲೀಸರು ಅಮಾಯಕನ ಮೇಲೆ ಹಲ್ಲೆ ನಡೆಸಿದ್ದಾರೆಯೇ? ಅಥವಾ ಪೊಲೀಸರಿಗೂ ಈ ಹಲ್ಲೆಗೂ ಯಾವುದೇ ಸಂಬಂಧವಿಲ್ಲವೇ ಎಂಬ ಬಗ್ಗೆ ತನಿಖೆಯಾಗಬೇಕಾಗಿದೆ, ಉನ್ನತ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಪೊಲೀಸರ ತಪ್ಪಿದೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

You may also like

Leave a Comment