Home » ಶಾಲೆ ಆರಂಭದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ನೀಡಿದ ಸಚಿವ ಬಿ ಸಿ ನಾಗೇಶ್

ಶಾಲೆ ಆರಂಭದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ನೀಡಿದ ಸಚಿವ ಬಿ ಸಿ ನಾಗೇಶ್

0 comments

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ.

ಈಗ ಶಾಲೆಗಳನ್ನು ಮತ್ತೆ ತೆರೆಯುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಹತ್ವದ ಮಾಹಿತಿ ಹೇಳಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದರೆ ಶಾಲೆ ಆರಂಭ ಮಾಡುತ್ತೇವೆ. ರಾಜ್ಯದಲ್ಲಿ 5 ವರ್ಷದ ಮೇಲ್ಪಟ್ಟ ಮಕ್ಕಳಲ್ಲಿ ಕೊರೊನಾ ಕೇಸು ಹೆಚ್ಚಾಗಿದೆ. ಆದರೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮಕ್ಕಳಿಗೆ ಸಮಸ್ಯೆಯಾಗಿಲ್ಲ. ಶೈಕ್ಷಣಿಕ ದೃಷ್ಟಿಯಿಂದ ಶಾಲೆಗಳನ್ನು ತೆರೆಯಬಹುದು ಅನಿಸುತ್ತದೆ ಎಂದು ಸುದ್ದಿಗಾರರೊಂದಿಗೆ ಹೇಳಿದ್ದಾರೆ.

You may also like

Leave a Comment