4
2021-22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಬಿ ಸಿ ನಾಗೇಶ್ ಅವರು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
‘2021-22 ನೇ ಸಾಲಿನ ದ್ವಿತೀಯ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ ‘ ಎಂದು ಟ್ವೀಟ್ ಮಾಡಿದ್ದಾರೆ ಸಚಿವರು.
ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಇದಕ್ಕೆ ವಿದ್ಯಾರ್ಥಿಗಳ ಆಕ್ಷೇಪಣೆಗಳಿದ್ದರೆ 5 ಫೆಬ್ರವರಿ 2022 ರಂದು ಅಥವಾ ಅದಕ್ಕೂ ಮೊದಲು ಇಮೇಲ್ ಐಡಿ dpuemqp@gmail.com ಮೂಲಕ ಸಲ್ಲಿಸಬಹುದು.
