Home » ಬೆಳ್ತಂಗಡಿ : ಹೋಟೆಲ್ ಉದ್ಯಮಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ : ಹೋಟೆಲ್ ಉದ್ಯಮಿ ನೇಣುಬಿಗಿದುಕೊಂಡು ಆತ್ಮಹತ್ಯೆ

0 comments

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಅಳದಂಗಡಿಯಲ್ಲಿ ನಡೆದಿದೆ.

ಮೃತರನ್ನು ಕಡಬ ಮೂಲದ ದಿನೇಶ್ ಎನ್ನಲಾಗಿದೆ. ನಿನ್ನೆ ಸಂಜೆ ತನ್ನ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಇವರು ಹಲವು ವರ್ಷಗಳ ಕಾಲ ಬೆಳ್ತಂಗಡಿಯ ಡಿ ಕೆ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಉದ್ಯೋಗದಲ್ಲಿದ್ದು, ಅನಂತರ ಅಳದಂಗಡಿಯಲ್ಲಿ ಹೋಟೆಲ್ ಒಂದನ್ನು ನಡೆಸುತ್ತಿದ್ದರು. ಗುರುವಾರ ( ಫೆ.3 ) ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇವರ ಕುಟುಂಬದ ಬಗ್ಗೆ ಯಾವುದೇ ರೀತಿಯ ವಿಷಯ ತಿಳಿದು ಬಂದಿಲ್ಲ. ಪಾರ್ಥೀವ ಶರೀರವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ.

You may also like

Leave a Comment