Home » ಲತಾ ಮಂಗೇಶ್ಕರ್ ಮೇಲೆ ಉಗುಳಿದ ಪ್ರಕರಣ : ಬಾಲಿವುಡ್ ಬಾದ್ ಶಾ ಶಾರುಖ್ ನದ್ದು ಹೀನ ಮನಸ್ಥಿತಿ| ಇವುಗಳನ್ನು ಬುಡಸಮೇತ ಕಿತ್ತುಹಾಕಬೇಕು – ಸಂಸದ ಅನಂತ್ ಕುಮಾರ್ ಹೆಗಡೆ ಆಕ್ರೋಶ

ಲತಾ ಮಂಗೇಶ್ಕರ್ ಮೇಲೆ ಉಗುಳಿದ ಪ್ರಕರಣ : ಬಾಲಿವುಡ್ ಬಾದ್ ಶಾ ಶಾರುಖ್ ನದ್ದು ಹೀನ ಮನಸ್ಥಿತಿ| ಇವುಗಳನ್ನು ಬುಡಸಮೇತ ಕಿತ್ತುಹಾಕಬೇಕು – ಸಂಸದ ಅನಂತ್ ಕುಮಾರ್ ಹೆಗಡೆ ಆಕ್ರೋಶ

0 comments

ಕಾರವಾರ : ಭಾರತ ರತ್ನ ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನ ಪಡೆಯುವ ಸಂದರ್ಭದಲ್ಲಿ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಮಾಸ್ಕ್ ತೆಗೆದು ಲತಾ ಅವರ ಮೃತದೇಹದ ಮೇಲೆ ಉಗುಳಿದ್ದಾರೆ ಎಂಬ ವೀಡಿಯೋ ಒಂದು ವೈರಲ್ ಆಗಿದ್ದು. ಇದಕ್ಕೆ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ವೀಡಿಯೋವನ್ನು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ತಮ್ಮ ಫೇಸ್ಬುಕ್ ನಲ್ಲಿ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್ ಖಾನ್ ಗಳ ದರಿದ್ರ ಮನಸ್ಥಿತಿ ಹೀಗೆನೇ. ತಮ್ಮ ಅಸಹಜ ನಡವಳಿಕೆಯಿಂದ ದೇಶದ ಗಮನ ತಮ್ಮತ್ತ ಸೆಳೆಯುವುದು, ಪ್ರಚಾರದ ತೆವಲಾಗಿದೆ. ಸಂಪ್ರದಾಯದ ಹೆಸರಿನಲ್ಲಿ ಅನಿಷ್ಟಗಳನ್ನು ಮಾಡುವುದು, ರಾಷ್ಟಧ್ವಜವನ್ನು ಹೊದಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಶವದ ಮೇಲೆ ಉಗುಳುವುದು ಅವರ ಹೀನ ಮನಸ್ಥಿತಿಯನ್ನು ತೋರಿಸುತ್ತದೆ. ಇವುಗಳನ್ನು ಬುಡಸಮೇತ ಕಿತ್ತುಹಾಕೋ ತನಕ ಹೀಗೆ ಎಂದು ಆಕ್ರೋಶ ದಿಂದ ಬರೆದಿದ್ದಾರೆ.

You may also like

Leave a Comment