Home » 9 ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು!!!

9 ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು!!!

0 comments

ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು‌ ನಾಲ್ಕು ಜನ ದುಷ್ಕರ್ಮಿಗಳು ‌ಅಪಹರಿಸಿ‌ ಸಾಮೂಹಿಕ‌ ಅತ್ಯಾಚಾರ ಮಾಡಿದ ಘಟನೆಯೊಂದು ನಡೆದಿದೆ

ಬಂಗಾರಪೇಟೆಯ ತಾಲೂಕಿನ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆನಂದ ಕುಮಾರ್ ( 25), ಕಾಂತರಾಜ್ (23),ಪ್ರವೀಣ್ ( 21), ವೇಣು ( 19) ಬಂಧಿತ ಆರೋಪಿಗಳು.

ಶುಕ್ರವಾರ ಸಂಜೆ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಾಲ್ವರ ವಿರುದ್ಧ ಪೋಸ್ಕೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment