Home » ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ನಿಧನ!

ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ನಿಧನ!

0 comments

ಕೊಚ್ಚಿ : ಮಲಯಾಳಂ ಹಿರಿಯ ನಟಿ ಕೆಪಿಎಸಿ ಲಲಿತಾ ( 74) ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಗ್ಯ ತೀವ್ರ ಹದಗೆಟ್ಟ ಕಾರಣ ಪುತ್ರ ನಟ ಸಿದ್ಧಾರ್ಥ್ ಮನೆಗೆ ಕರೆತರಲಾಗಿತ್ತು. ರಂಗಭೂಮಿ ಕಲಾವಿದೆಯಾಗಿ ವೃತ್ತಿ ಜೀವನ ಆರಂಭಿಸಿದ ಲಲಿತಾ ಅವರು 550 ಸಿನಿಮಾಗಳಲ್ಲಿ ನಟಿಸಿದ್ದು, ಎರಡು ಬಾರಿ ಅತ್ಯುತ್ತಮ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ನಾಲ್ಕು ಬಾರಿ ರಾಜ್ಯ ಪ್ರಶಸ್ತಿ ಸೇರಿದಂತೆ ಇನ್ನೂ ಅನೇಕ ಗೌರವ ಮತ್ತು ಪ್ರಶಸ್ತಿಗೆ ಭಾಜನರಾಗಿದ್ದಾರೆ.

You may also like

Leave a Comment