Home » ಮದ್ಯಪ್ರಿಯರೇ ನಿಮಗೊಂದು ಗುಡ್ ನ್ಯೂಸ್ : ಮದ್ಯದ ದರದಲ್ಲಿ ಹೆಚ್ಚಳವಿಲ್ಲ- ಅಬಕಾರಿ ಸಚಿವ ಕೆ ಗೋಪಾಲಯ್ಯ

ಮದ್ಯಪ್ರಿಯರೇ ನಿಮಗೊಂದು ಗುಡ್ ನ್ಯೂಸ್ : ಮದ್ಯದ ದರದಲ್ಲಿ ಹೆಚ್ಚಳವಿಲ್ಲ- ಅಬಕಾರಿ ಸಚಿವ ಕೆ ಗೋಪಾಲಯ್ಯ

0 comments

ಬೆಂಗಳೂರು : ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರಕಾರ ಚಿಂತನೆ ಮಾಡಿಲ್ಲ ಎಂಬುದಾಗಿ ಹೇಳಿದ್ದಾರೆ.

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದ್ದಾರೆ.

2022-23 ನೇ ಸಾಲಿನ ರಾಜ್ಯ ಬಜೆಟ್ ‌ಬಗ್ಗೆ ವಿಧಾನಸೌಧದಲ್ಲಿಂದು ಸಭೆ ನಡೆದ ನಂತರ ,ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೇ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆಯ ಮಾತುಗಳನ್ನಾಡಿದ್ದಾರೆ ಎಂದು ಹೇಳಿದರು.

ಶುಕ್ರವಾರ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚಿಂತನೆ ನಡೆಸಲಾಗುವುದು. ಬಜೆಟ್ ಅಥವಾ ಆ ನಂತರ ಸೂಕ್ತವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಸಚಿವ ಕೆ.ಗೋಪಾಲಯ್ಯ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

You may also like

Leave a Comment