Home » ಕಡಬ: ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ಮೇರಿ ಇ.ಟಿ ಅವರಿಗೆ ಸೇವಾ ನಿವೃತ್ತಿ-ವಿದಾಯ ಕೂಟ

ಕಡಬ: ಹೊಸಮಠ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ಮೇರಿ ಇ.ಟಿ ಅವರಿಗೆ ಸೇವಾ ನಿವೃತ್ತಿ-ವಿದಾಯ ಕೂಟ

0 comments

ಕಡಬ: ತಾಲೂಕಿನ ಹೊಸಮಠ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 19 ವರ್ಷಗಳಿಂದ ಪ್ರಭಾರ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮೇರಿ ಇ.ಟಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಫೆ.28 ರಂದು ಬೀಳ್ಕೊಡುಗೆ ಕಾರ್ಯಕ್ರಮ ಹೊಸಮಠ ಶಾಲೆಯಲ್ಲಿ ನೆರವೇರಿತು.

2003 ರಲ್ಲಿ ಕಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆಗೊಂಡಿದ್ದ ಮೇರಿ ಇ.ಟಿ ಅವರು ಸತತವಾಗಿ 19 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ಶಾಲೆಯನ್ನು ಮೇಲ್ದರ್ಜೆಗೇರಿಸುವಲ್ಲಿ ಉತ್ತಮ ಪಾತ್ರ ವಹಿಸಿದ್ದು, ವಿದಾಯ ಸನ್ಮಾನ ಮಾಡುವ ಮೂಲಕ ಅವರ ಕಾರ್ಯವೈಖರಿಯನ್ನು ಈ ಸಂದರ್ಭದಲ್ಲಿ ಮೆಲುಕು ಹಾಕಲಾಯಿತು.

ಶಾಲಾ ಆಡಳಿತ ಮಂಡಳಿ, ಶಿಕ್ಷಕರ ಸಂಘ ಹಾಗೂ ಹಿರಿಯ ವಿದ್ಯಾರ್ಥಿ-ಪೋಷಕರ ವತಿಯಿಂದ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಆಲಂಕಾರು ಕ್ಲಸ್ಟರ್ ಸಿ.ಆರ್.ಪಿ ಯಶೋಧ, ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ವಿಮಲ್ ಕುಮಾರ್, ತಾಲೂಕು ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಕುಟ್ರುಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಕೆರೆಕೋಡಿ, ಸದಸ್ಯರಾದ ಮಹಮ್ಮದ್ ಆಲಿ, ಸುಧೀರ್ ದೇವಾಡಿಗ, ಶಾಲಾಡಳಿತ ಸಮಿತಿ ಅಧ್ಯಕ್ಷರಾದ ತನಿಯ ಸಂಪಡ್ಕ, ಖತೀಜ, ಅಲಂಕಾರು ಕ್ಲಸ್ಟರ್ ನ ಎಲ್ಲಾ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿ-ಹಳೇ ವಿದ್ಯಾರ್ಥಿ ವೃಂದ ಹಾಗೂ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

You may also like

Leave a Comment