Home » ಕಡಬ: ಆತೂರು ಸಮೀಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು!! ನಗದು ಸಹಿತ ಚಿನ್ನಭರಣ ಲೂಟಿ-ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ

ಕಡಬ: ಆತೂರು ಸಮೀಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು!! ನಗದು ಸಹಿತ ಚಿನ್ನಭರಣ ಲೂಟಿ-ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ

0 comments

ಕಡಬ : ಪೊಲೀಸ್ ಠಾಣಾ ವ್ಯಾಪ್ತಿಯ ಕೊಯಿಲ ಗಂಡಿಬಾಗಿಲು ಎಂಬಲ್ಲಿ ಮನೆಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷ ರೂಪಾಯಿ ನಗದು ಹಾಗೂ ಚಿನ್ನಭಾರಣಗಳನ್ನು ದೋಚಿ ಪರಾರಿಯಾದ ಘಟನೆಯು ಮಾರ್ಚ್ 03 ರಂದು ರಾತ್ರಿ ನಡೆದಿದೆ.

ಗಂಡಿ ಬಾಗಿಲು ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆ ಮಂದಿ ಸಮೀಪದ ಮಸೀದಿಯಲ್ಲಿ ಕಾರ್ಯಕ್ರಮದ ನಿಮಿತ್ತ ಹೋಗಿದ್ದು ರಾತ್ರಿ ವಾಪಾಸ್ಸಾದಾಗ ಈ ಘಟನೆ ಬೆಳಕಿಗೆ ಬಂದಿದೆ.

ಮನೆಯ ಕಾಪಾಟಿನಲ್ಲಿ ಇರಿಸಿದ್ದ ಸುಮಾರು 14 ಪವನ್ ಚಿನ್ನ ಹಾಗೂ ನಲವತ್ತು ಸಾವಿರಕ್ಕೂ ಮಿಕ್ಕಿ ನಗದು ಕಳ್ಳರ ಪಾಲಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like

Leave a Comment