Home » ‘ದಿ ಕಾಶ್ಮೀರ್ ಫೈಲ್ಸ್ ‘ ಸಿನಿಮಾದ ಕುರಿತು ಶಾಕಿಂಗ್ ಕಮೆಂಟ್ ನೀಡಿದ ಪ್ರಕಾಶ್ ರಾಜ್ | ಜಸ್ಟ್ ಆಸ್ಕಿಂಗ್ ಎಂದ ನಟ

‘ದಿ ಕಾಶ್ಮೀರ್ ಫೈಲ್ಸ್ ‘ ಸಿನಿಮಾದ ಕುರಿತು ಶಾಕಿಂಗ್ ಕಮೆಂಟ್ ನೀಡಿದ ಪ್ರಕಾಶ್ ರಾಜ್ | ಜಸ್ಟ್ ಆಸ್ಕಿಂಗ್ ಎಂದ ನಟ

0 comments

ಇತ್ತೀಚೆಗೆ ಎಲ್ಲರ ಬಾಯಲ್ಲಿ ಒಂದೇ ಮಾತು ಅದೇ ‘ ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ. ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭರ್ಜರಿ ಪ್ರದರ್ಶನದೊಂದಿಗೆ ವ್ಯಾಪಕ ಚರ್ಚೆಗೂ ಕಾರಣವಾಗಿದೆ. 1990 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯ ಕುರಿತ ನೈಜ ಘಟನೆ ಆಧಾರಿತ ಸಿನಿಮಾ ಇದು.‌

ಈ ಸಿನಿಮಾ ನೋಡಿ ಸಿನಿಮಾ ನೋಡಿ ಪ್ರಕಾಶ್ ರಾಜ್ ಟ್ವೀಟೊಂದನ್ನು ಮಾಡಿದ್ದು, ಅದರ ಬಗ್ಗೆ ಈಗ ವ್ಯಾಪಕ ಚರ್ಚೆ ಆಗುತ್ತಿದೆ.

ಅಷ್ಟಕ್ಕೂ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್ ಏನು ಅಂದರೆ, ಕಾಶ್ಮೀರ ಫೈಲ್ಸ್ ಚಿತ್ರವು ಹಳೆಯ ಗಾಯಗಳನ್ನು ವಾಸಿಮಾಡುತ್ತದೆಯೇ? ಅಥವಾ ಇದು ಹೆಚ್ಚು ಪ್ರಚೋದನಕಾರಿಯಾಗಿ ಮಾಡುತ್ತದೆಯೇ? ಅಥವಾ ದ್ವೇಷದ ಬೀಜಗಳನ್ನು ಬಿತ್ತುವುದೇ? ಜಸ್ಟ್ ಆಸ್ಕಿಂಗ್’ ಎಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್ ಜೊತೆಗೆ ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆ ಬಳಿಕ ಚಿತ್ರಮಂದಿರದಲ್ಲಿ ವ್ಯಕ್ತಿಯೋರ್ವ ವೀಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ದೃಶ್ಯದ ಲಿಂಕ್ ಹಾಕಿದ್ದಾರೆ.

You may also like

Leave a Comment