ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸ್ಗೆ ಮಹಿಳೆಯೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಚಪ್ಪಲಿಯಿಂದ ಟಪಟಪನೆ ಹೊಡೆದಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಲಕ್ನೋದ ಚಾರ್ ಬಾಗ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ವೀಡಿಯೋದಲ್ಲಿ ಪೊಲೀಸ್, ಒಬ್ಬ ವ್ಯಕ್ತಿ ಮತ್ತು ಮಹಿಳೆ ನಡುವೆ ಮಾರಾಮಾರಿ ನಡೆದಿರುವುದನ್ನು ಕಾಣಬಹುದಾಗಿದೆ. ಮಹಿಳೆ ತನ್ನ ಚಪ್ಪಲಿಯಿಂದ ಪೊಲೀಸ್ ಮೇಲೆ ಹಲ್ಲೆ ನಡೆಸಿದಾಗ, ಮಹಿಳೆಯನ್ನು ಪೊಲೀಸ್ ದೂರಕ್ಕೆ ತಳ್ಳಿ, ವ್ಯಕ್ತಿಗೆ ಲಾಠಿಯಿಂದ ಹೊಡೆಯುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ.
This incident took place at Char Bagh station in Lucknow, where you can see how woman in the video beats up cop with her slipper for allegedly misbehaving with her. Was the cop drunk! #Lucknow Source- Social media pic.twitter.com/MTwU0dqIKk
ದಾರಿಹೋಕರೊಬ್ಬರು ಈ ವೀಡಿಯೋವನ್ನು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೆ ಕೆಲವರು ಪೊಲೀಸ್ ಮದ್ಯ ಸೇವಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದರೆ, ಇನ್ನೂ ಕೆಲವರು ಪೊಲೀಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.