Home » ಗುಂಡೇಟಿಗೆ ಬಿಜೆಪಿ ಮುಖಂಡ ಸಾವು | ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಗುಂಡೇಟಿಗೆ ಬಿಜೆಪಿ ಮುಖಂಡ ಸಾವು | ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

0 comments

ಅರಣ್ಯ ಪ್ರದೇಶದಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆಯೊಂದು ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ಶನಿವಾರ ನಡೆದಿದೆ.

ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ ಕಾಂತರಾಜ್ ಅವರು ಬಿದ್ದು ಚೀರಾಡುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ
ಬಳಿ ಕಾಂತರಾಜ್ ಪ್ರಾಣಿ ಶಿಕಾರಿಗೆ ತೆರಳಿದ್ದಾರೆ ಎನ್ನಲಾಗಿದೆ. ಈ ವೇಳೆ ಬಂದೂಕಿನಿಂದ ಹಾರಿದ ಗುಂಡಿಗೆ ಕಾಂತರಾಜು ಅವರು ಗಂಭೀರವಾಗಿ ಗಾಯಗೊಂಡಿದ್ದರು ಎಂದು ಹೇಳಲಾಗಿದ್ದು, ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಕಾಂತರಾಜ್ ನೋವಿನಿಂದ ಚೀರಾಡುತ್ತಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರೂ, ಈ ವೇಳೆ ದಾರಿ ಮಧ್ಯೆ ಕಾಂತರಾಜ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಜೆಸಿ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿದ್ದಾರೆ.

ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಂಡರು. ಬಿಜೆಪಿ ಮುಖಂಡರು, ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಚರ್ಚಿಸಿದರು. ಶವ ಪರೀಕ್ಷೆ ಕುರಿತಾಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

You may also like

Leave a Comment