Home » ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿ

by Praveen Chennavara
0 comments

ಕಡಬ : ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಕಡಬ ತಾಲೂಕಿನ ಸುಬ್ರಹ್ಮಣ್ಯ
ದೇವಸ್ಥಾನದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ರಾನ್ಜೀವ ಎಂಬ ಸುಬ್ರಹ್ಮಣ್ಯ ದೇವರಿಗೆ ಸಂಬಂಧ ಪಟ್ಟ ಮರದ ಸಸಿಯನ್ನು ನೆಟ್ಟರು.

ದೇವಾಲಯದ 500ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಅವರು, ಎಲ್ಲಾ ದೇವಾಲಯದವರು ಕೂಡ ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇಲ್ಲಿ ಬರುವ ಭಕ್ತಾದಿಗಳು ಆದಷ್ಟು ಪ್ಲಾಸ್ಟಿಕ್ ಕಡಿಮೆ ಬಳಕೆ ಮಾಡಿ. ಇದು ವಿವಿಧ ನಾಗ ಸಂಚಾರದ ಕ್ಷೇತ್ರ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಬಿಸಾಡಿ ಅವುಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್, ಸದಸ್ಯ ಪ್ರಸನ್ನ ದರ್ಬೆ, ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

You may also like

Leave a Comment