Home » ಇಂದು ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ!! ಬಿಗಿ ಬಂದೋಬಸ್ತ್

ಇಂದು ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ!! ಬಿಗಿ ಬಂದೋಬಸ್ತ್

0 comments

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇಂದು ರಾತ್ರಿ 9:20 ರ ಸುಮಾರಿಗೆ ದೆಹಲಿಯಿಂದ ಹೊರಟು ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿರುವ ಶಾ,ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಿಜೆಪಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲೆಂದು ಶಾ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.ಕಳೆದ 2018 ರಲ್ಲಿ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ತಿರಂಗ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಾ ಕಾರ್ಯಕರ್ತರನ್ನು ತನ್ನ ಚಾಣಕ್ಯತಣದ ಮಾತುಗಾರಿಕೆಯಿಂದ ಹುರಿದುಂಬಿಸಿದ್ದರು.

ಶಾ ಭೇಟಿಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ಕಂಡಿದ್ದು,ಮಂಗಳೂರಿನಲ್ಲಿ ಬಿಜೆಪಿ ಬೆಂಬಲಿತರು ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದ್ದರು.ಈ ಬಾರಿ ಮತ್ತೊಮ್ಮೆ ಶಾ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದೂ,ಶಾ ಭೇಟಿಯ ಬಳಿಕ ಬಿಜೆಪಿ ರಾಜಕಾರಣದಲ್ಲಿ ಯಾವ ಬದಲಾವಣೆ ಆಗಲಿದೆ ಎಂಬುವುದನ್ನು ಕಾದುನೋಡಬೇಕಾಗಿದೆ.

You may also like

Leave a Comment