Home » SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು ಸಿಬ್ಬಂದಿ!!!

SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು ಸಿಬ್ಬಂದಿ!!!

by Mallika
0 comments

ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆಯೊಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಓರ್ವ ವಿದ್ಯಾರ್ಥಿ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಕೊಠಡಿ ಮೇಲ್ವಿಚಾರಕರು, ಕಚೇರಿ ಸಹಾಯಕರು, ಪರಿಚಾರಕರು, ಇಬ್ಬರು ಆಶಾ ಕಾರ್ಯಕರ್ತೆಯರು, ದೈಹಿಕ ಶಿಕ್ಷಕರು, ಓರ್ವ ಪೊಲೀಸ್ ಸಿಬ್ಬಂದಿ, ಓರ್ವ ಸ್ಥಾನಿಕ ಜಾಗೃತ ದಳದ ಅಧಿಕಾರಿ, 3 ಜನ ಫೈಯಿಂಗ್ ಸ್ಕ್ಯಾಡ್, ಮೂವರು ಮಾರ್ಗಾಧಿಕಾರಿಗಳು, ಇಬ್ಬರು ಖಜಾನೆ ಅಧಿಕಾರಿಗಳು ಕರ್ತವ್ಯದಲ್ಲಿದ್ದರು.

ಆದರೆ, ಪರೀಕ್ಷೆ ಬರೆಯಬೇಕಿದ್ದ ವಿಶೇಷಚೇತನ ವಿದ್ಯಾರ್ಥಿ ಮೆಹಬೂಬ್ ಹುಸೇನ್ ಪರೀಕ್ಷೆಗೆ ಗೈರಾಗಿದ್ದರು. ಈ ಬಗ್ಗೆ ಮಾಹಿತಿ ಇಲ್ಲದ ಸಿಬ್ಬಂದಿ ವಿದ್ಯಾರ್ಥಿಗಾಗಿ ಕಾದು ಕುಳಿತರು. ಆದರೆ ಆ ವಿದ್ಯಾರ್ಥಿ ಪರೀಕ್ಷೆಗೆ ಗೈರಾಗಿದ್ದು, ಸಿಬ್ಬಂದಿ ಕಾದು ಕುಳಿತರೂ ಪ್ರಯೋಜನವಾಗಲಿಲ್ಲ.

You may also like

Leave a Comment