Home » SC,ST ಬಿಪಿಎಲ್ ಕಾರ್ಡ್ ದಾರರ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ !!

SC,ST ಬಿಪಿಎಲ್ ಕಾರ್ಡ್ ದಾರರ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ !!

0 comments

ಕರ್ನಾಟಕ ಸರ್ಕಾರ ಈ ಹಿಂದೆ ಘೋಷಿಸಿದ್ದ SC, ST ಬಿಪಿಎಲ್ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ 75 ಯುನಿಟ್ ವರೆಗೆ ನೀಡುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ನಗರಪ್ರದೇಶಕ್ಕೂ ವಿಸ್ತರಿಸಲಾಗಿದೆ. ಮೇ 13ರಂದು ಸರ್ಕಾರ ಹೊರಡಿಸಿದ ಆದೇಶದಲ್ಲಿ ಗ್ರಾಮೀಣ ಭಾಗದ ಬಡವರಿಗೆ ಮಾತ್ರ ಯೋಜನೆ ಸೌಲಭ್ಯ ಇತ್ತು. ಇದೀಗ ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಹೊಸ ಆದೇಶ ಮಾಡಲಾಗಿದೆ. ಈ ಮೂಲಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾಗ್ಯಜ್ಯೋತಿ ಹಾಗೂ ಕುಟೀರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ ನಿರಂತರವಾಗಲಿದೆ.

You may also like

Leave a Comment