Home » ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯು ಟರ್ನ್ !! | ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯು ಟರ್ನ್ !! | ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

0 comments

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಪೋಲೀಸರನ್ನು ಕಂಡು ಭಯದಿಂದ ತಪ್ಪಿಸಿಕೊಳ್ಳುವಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ ದೊರೆಸ್ವಾಮಿ ಮೃತ ಯುವಕರು.

ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೂವರು ಯುವಕರು ತ್ರಿಬಲ್ ರೈಡಿಂಗ್‌ನಲ್ಲಿ ಹೋಗುತ್ತಿದ್ದರು. ಆಗ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ನೋಡಿದ್ದಾರೆ. ಹಾಗಾಗಿ ಅವರಿಂದ ಪರಾರಿಯಾಗಲು ಯತ್ನಿಸಿದ್ದಾರೆ.

ಇದೇ ಆತುರದಲ್ಲಿ ಯು ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದರೇ, ಮತ್ತೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

You may also like

Leave a Comment