Home » ಬೆಳ್ಳಂ ಬೆಳಿಗ್ಗೆ ಧಾರವಾಡದಲ್ಲಿ ಭೀಕರ ಅಪಘಾತ

ಬೆಳ್ಳಂ ಬೆಳಿಗ್ಗೆ ಧಾರವಾಡದಲ್ಲಿ ಭೀಕರ ಅಪಘಾತ

0 comments

ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ರೇವಣ ಸಿದ್ದೇಶ್ವರ ಮಠದಲ್ಲಿ ಮದುವೆ ಮುಗಿಸಿಕೊಂಡು ನಿಗದಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿದ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕುರಿತು ಮಾಹಿತಿ ಪಡೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

Leave a Comment