Home » ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ!!!

ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ!!!

0 comments

ಕುಂದಾಪುರದ ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್ ( ಕಟ್ಟೆ ಭೋಜಣ್ಣ) (80) ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆಯೊಂದು ನಡೆದಿದೆ.

ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಅವರು ಈ ಕೃತ್ಯ ಎಸಗಿದ್ದಾರೆ.

ರಿವಾಲ್ವರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಸಾರ್ವಜನಿಕ ವಲಯದಲ್ಲಿ ದಿಗ್ಭ್ರಮೆ ಮೂಡಿಸಿದೆ. ಬೆಂಗಳೂರಿನಲ್ಲಿ ಹೋಟೆಲ್, ಬಟ್ಟೆ ಅಂಗಡಿ ಗಳನ್ನು ನಡೆಸುತ್ತಿದ್ದು, ಬಹುಕೋಟಿ ಆಸ್ತಿಗಳ ಒಡೆಯರಾಗಿದ್ದರು. ಅವರ ಒಡೆತನದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿರಪರಿಚಿತ ಹೆಸರು.

ಭೂಮಿ ಹಾಗೂ ಹಣ ಕಾಸಿನ ವ್ಯವಹಾರವೇ ಅವರ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತರು ಪತ್ನಿ ಭಾಗೀರಥಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

You may also like

Leave a Comment