Home » ಪ್ರೀತಿಸಿ ಮದುವೆಯಾದ ನವವಿವಾಹಿತೆ ನೇಣಿಗೆ ಶರಣು !!!

ಪ್ರೀತಿಸಿ ಮದುವೆಯಾದ ನವವಿವಾಹಿತೆ ನೇಣಿಗೆ ಶರಣು !!!

0 comments

ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾದ ವಿವಾಹಿತೆಯೋರ್ವಳು ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಿನ್ನೆ ಚಿಕ್ಕಬಳ್ಳಾಪುರ ನಗರದ ಶೆಟ್ಟಳ್ಳಿ ಬಡಾವಣೆಯಲ್ಲಿ ನಡೆದಿದೆ.

ಅನುಷಾ (21) ಎಂಬಾಕೆಯೇ ಮೃತ ದುರ್ದೈವಿ.

ಮೃತ ಅನುಷಾ ಹಾಗೂ ಅಭಿಲಾಷ್ ಎಂಬಾತ ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಮನಸ್ತಾಪ ಆಗಿದ್ದರಿಂದ ಈತನೇ ಪತ್ನಿಯನ್ನು ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ನಿನ್ನೆ ತಡರಾತ್ರಿ ಅನುಷಾ ಮೃತದೇಹ ಗಂಡನ ಮನೆಯಲ್ಲಿ ಪತ್ತೆಯಾಗಿದೆ. ಈಕೆಯ ಪೋಷಕರು ಅನುಷಾ ಗಂಡನ ಮೇಲೆ ಆರೋಪಿಸಿ ದೂರು ದಾಖಲಿಸಿದ್ದಾರೆ.

ಸದ್ಯ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

You may also like

Leave a Comment