Home » ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 80 ಕಡೆಗಳಲ್ಲಿ ಎಸಿಬಿ ದಾಳಿ

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 80 ಕಡೆಗಳಲ್ಲಿ ಎಸಿಬಿ ದಾಳಿ

by Praveen Chennavara
0 comments

ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದೆ‌.

ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜೂ.17ರ ಬೆಳಗ್ಗೆ ಆರು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಸಿಬಿ ದಾಳಿ ಮಾಡಿದೆ. ಬೆಂಗಳೂರಿನ ಜೆಪಿ ನಗರ, ಬಸವನಗುಡಿ, ಚಂದ್ರಾಲೇಔಟ್ ಹಾಗೂ ದೊಡ್ಡಕಲ್ಲಸಂದ್ರದಲ್ಲಿ ದಾಳಿ ನಡೆಸಿದೆ.

You may also like

Leave a Comment