Home » ಮಂಗಳೂರು : ಗುದದ್ವಾರದ ಮೂಲಕ ಅಕ್ರಮ ಚಿನ್ನ ಸಾಗಾಟ!!!

ಮಂಗಳೂರು : ಗುದದ್ವಾರದ ಮೂಲಕ ಅಕ್ರಮ ಚಿನ್ನ ಸಾಗಾಟ!!!

0 comments

ಮಂಗಳೂರು: ದುಬೈನಿಂದ ಮಂಗಳೂರಿನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿ ಕಾಸರಗೋಡು ಮೂಲದವನೆಂದು ತಿಳಿದುಬಂದಿದ್ದು, ಈತನ ಬಳಿಯಿದ್ದ 24 ಕ್ಯಾರೆಟ್‌ನ 60.24 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಇಂಡಿಗೋ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರೋಪಿಯನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಗುದದ್ವಾರದಲ್ಲಿ 4 ಅಂಡಾಕಾರದಲ್ಲಿ ಪ್ಯಾಕೆಟ್‌ಗಳಲ್ಲಿ ತುಂಬಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

You may also like

Leave a Comment