Home » ಉಡುಪಿ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ !

ಉಡುಪಿ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ !

0 comments

ಉಡುಪಿ: ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ವೈಯುಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.

ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ (19) ಸಾವನ್ನಪ್ಪಿದ ಯುವತಿ.
ತಲೆನೋವು ಎಂದು ಹೇಳಿ ತನ್ನ ಕೋಣೆಗೆ ಹೋಗಿ ಮಲಗಿದ್ದ ಈಕೆ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ‌ನಡೆಸುತ್ತಿದ್ದಾರೆ.

You may also like

Leave a Comment