Home » ಜೂ.30ರಂದು ಉದ್ದವ್ ಗೆ ವಿಶ್ವಾಸ ಮತಯಾಚನೆಗೆ ರಾಜ್ಯಪಾಲರ ಸೂಚನೆ

ಜೂ.30ರಂದು ಉದ್ದವ್ ಗೆ ವಿಶ್ವಾಸ ಮತಯಾಚನೆಗೆ ರಾಜ್ಯಪಾಲರ ಸೂಚನೆ

by Praveen Chennavara
0 comments

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್​​ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಬೆನ್ನೆಲ್ಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿಶ್ವಾಸ ಮತ ಸಾಬೀತುಪಡಿಸಲು ಸೂಚಿಸಿದ್ದಾರೆ.

ಜೂನ್ 30 ರಂದು ಬೆಳ್ಳಿಗೆ 11 ಗಂಟೆಗೆ ವಿಶ್ವಾಸ ಮತ ಸಾಬೀತುಪಡಿಸಲು ಸೂಚನೆ ನೀಡಿದ್ದಾರೆ. ಮಹಾವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿರುವ ಬೆನ್ನಲ್ಲೇ ಇಂದು ಬೆಳಗ್ಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಫಡ್ನವೀಸ್​​, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ಇದಾದ ಬಳಿಕ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಭೇಟಿ ಮಾಡಿ ಮಹತ್ವ ಚರ್ಚೆ ನಡೆಸಿದ್ದಾರೆ. ಇದರ ಬೆನ್ನೆಲ್ಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿಶ್ವಾಸ ಮತ ಸಾಭೀತುಪಡಿಸಲು ರಾಜ್ಯಪಾಲರು ಸೂಚನೆ ನೀಡಿದ್ದಾರೆ.

You may also like

Leave a Comment