Home » ನಿವೃತ್ತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ ರಾಜ್ಯಸರ್ಕಾರ

ನಿವೃತ್ತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ ರಾಜ್ಯಸರ್ಕಾರ

0 comments

ರಾಜ್ಯ ಸರ್ಕಾರ ನಿವೃತ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದ್ದು, ಸರ್ಕಾರಿ ನೌಕರರಿಗೆ ನೀಡುತ್ತಿರುವ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಿವೃತ್ತರಿಗೂ ವಿಸ್ತರಿಸಲಿದೆ.

ಶುಕ್ರವಾರದಂದು ಬೆಂಗಳೂರಿನ ವಿಜಯನಗರದ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಣೆ ಸಂಬಂಧ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರವೇ ಘೋಷಣೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರು ಸರ್ಕಾರದ ಎರಡು ಕಣ್ಣುಗಳಿದ್ದಂತೆ ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿವೃತ್ತ ನೌಕರರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರಲ್ಲದೆ, ನಿಮ್ಮ ಅನುಭವವನ್ನು ಸಮಾಜದ ಮಾರ್ಗದರ್ಶನಕ್ಕೆ ಬಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಈವರೆಗೆ ಸರ್ಕಾರಿ ನೌಕರರಿಗೆ ನೀಡುತ್ತಿದ್ದಂತಹ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಿವೃತ್ತರಿಗೂ ವಿಸ್ತರಿಸಲಿದೆ.

You may also like

Leave a Comment