Home » ಕಾರ್ಮಿಕ ಇಲಾಖೆಯ ವತಿಯಿಂದ ಜುಲೈ 15 ರಿಂದ ಆಗಸ್ಟ್ 15ರವರೆಗೆ ಜಿಲ್ಲಾ ಅದಾಲತ್ ಕಾರ್ಯಕ್ರಮ

ಕಾರ್ಮಿಕ ಇಲಾಖೆಯ ವತಿಯಿಂದ ಜುಲೈ 15 ರಿಂದ ಆಗಸ್ಟ್ 15ರವರೆಗೆ ಜಿಲ್ಲಾ ಅದಾಲತ್ ಕಾರ್ಯಕ್ರಮ

0 comments

ಉಡುಪಿ :ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವಿಕೃತವಾಗಿರುವ, ಇತ್ಯಾರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ 15 ರಿಂದ ಆಗಸ್ಟ್ 15ರ ವರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಉಡುಪಿ, ಕುಂದಾಪುರ, ಕಾರ್ಕಳ ಕಾರ್ಮಿಕ ನೀರಿಕ್ಷಕರ ಕಚೇರಿಯಲ್ಲಿ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿರುವುದು.

ಜಿಲ್ಲೆಯ ಕಾರ್ಮಿಕರು, ಮಾಲೀಕರು ಹಾಗೂ ಸಂಘಟಕರು ಅಗತ್ಯ ದಾಖಲೆಯೊಂದಿಗೆ ಖುದ್ದಾಗಿ ಹಾಜರಾಗಿ ಬಾಕಿ ಇರುವ ಕಡತ, ಅರ್ಜಿ ಹಾಗೂ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿಕೊಡುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment