Home » ಉಡುಪಿ: ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಸ್ಕೂಟರ್ ಸವಾರ ಸಾವು

ಉಡುಪಿ: ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಸ್ಕೂಟರ್ ಸವಾರ ಸಾವು

0 comments

ಉಡುಪಿ : ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್‌ನಲ್ಲಿ ನಡೆದಿದೆ.

ಮೃತರು ಶರತ್ ಶೆಟ್ಟಿ (55).

ಮಳೆ ನೀರು ರಸ್ತೆಯಿಡಿ ತುಂಬಿದ್ದರಿಂದ ಗುಂಡಿಯಾವುದು ರಸ್ತೆ ಯಾವುದು ಎಂದು ತಿಳಿಯದೇ, ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಗುಂಡಿಗೆ ಬಿದ್ದಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment