Home » ಕಾಲೇಜಿಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ| ಆತಂಕದಲ್ಲಿ ಪೋಷಕರು

ಕಾಲೇಜಿಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ| ಆತಂಕದಲ್ಲಿ ಪೋಷಕರು

0 comments

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆಯಾಗಿರುವ ಶಾಕಿಂಗ್ ಘಟನೆಯೊಂದು ರಾಜ್ಯದಲ್ಲಿ ನಡೆದಿದೆ. ಈ ನಾಲ್ವರು ವಿದ್ಯಾರ್ಥಿನಿಯರು ಕಳೆದ ನಾಲ್ಕು ದಿನಗಳಿಂದ ನಾಲ್ವರು ಕಾಣೆಯಾಗಿದ್ದಾರೆ.

ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ. ಇಬ್ಬರು ಶಕ್ತಿನಗರ ಮತ್ತು ಇನ್ನಿಬ್ಬರು ರಾಯಚೂರು ನಗರದ ವಿದ್ಯಾರ್ಥಿನಿಯರು ಆಗಿದ್ದಾರೆ. ನಾಲ್ಕು ವಿದ್ಯಾರ್ಥಿನಿಯರ ಪೋಷಕರಲ್ಲಿ ಒಬ್ಬರಿಂದ ಮಹಿಳಾ ಠಾಣೆಗೆ ದೂರು ಪ್ರಕರಣ ದಾಖಲಿಸಲಾಗಿದೆ. ಮಾಹಿತಿ ಮೇರೆಗೆ ಸದರಬಜಾರ ಠಾಣೆ ಪಿಎಸ್ ಐ ಹಾಗೂ ಮಹಿಳಾ ಠಾಣಾ ಪಿಎಸ್ಐ ನೇತೃತ್ವದಲ್ಲಿ ಎರಡು ತಂಡ ರಚನೆ ಮಾಡಿ ತನಿಖೆ ಆರಂಭಿಸಿದ್ದಾರೆ.

ಮಕ್ಕಳ ನಾಪತ್ತೆ ಪ್ರಕರಣ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಿಗೆ ಏನಾಗಿದೆ ಎಂಬ ಭಯ ಹೆತ್ತವರಲ್ಲಿ ಮೂಡಿದೆ. ಉಳಿದಂತೆ ಕಾಲೇಜಿನ ಇನ್ನುಳಿದ ಪೋಷಕರು‌ ಕೂಡ ಈ ಬಗ್ಗೆ ಚಿಂತಿಸುವಂತೆ ಮಾಡಿದೆ.

You may also like

Leave a Comment