Home » `ಯೋಗಿ ಮಾಡೆಲ್’ ಜಾರಿ ಕುರಿತು ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ!!!

`ಯೋಗಿ ಮಾಡೆಲ್’ ಜಾರಿ ಕುರಿತು ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ!!!

by Mallika
0 comments

ರಾಜ್ಯದಲ್ಲಿ ಯೋಗಿ ಮಾಡೆಲ್ ಜಾರಿ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯದಲ್ಲಿ ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ. ನಮಗೆ ನಮ್ಮದೇ ಆದ ಕಾರಣ ಇದೆ ಎಂದು ಹೇಳಿದ್ದಾರೆ.

ಇಂದು ಬೆಂಗಳೂರಿನ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಬಿವಿಪಿ ಕಾರ್ಯಕರ್ತರು ಎಂದು ಹೇಳಿ ಪ್ರತಿಭಟನೆ ನಡೆಸಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ. ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

You may also like

Leave a Comment