Home » ‘ಫಸಲ್ ಬಿಮಾ ಬೆಳೆ ವಿಮೆ’ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

‘ಫಸಲ್ ಬಿಮಾ ಬೆಳೆ ವಿಮೆ’ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

0 comments

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಿದ ರೈತರಿಗೆ ಕೃಷಿ ನಿರ್ದೇಶಕರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.

ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪ ಪ್ರಕರಣದಡಿ ಅಂದರೆ ಆಲಿಕಲ್ಲು ಮಳೆ, ಭೂ ಕುಸಿತ ಹಾಗೂ ಬೆಳೆ ಮುಳುಗಡೆಯಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಿರುವ ರೈತರು ಅವಘಡ ಸಂಭವಿಸಿದ 72 ಗಂಟೆಯೊಳಗೆ ವಿಮಾ ಸಂಸ್ಥೆಯ(ಬಜಾಜ್ ಅಲಯಾನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ) ಟೋಲ್ ಫ್ರೀ ನಂಬರ್ 1800 209 5959 ಗೆ ಕರೆ ಮಾಡಿ ತಿಳಿಸುವುದು ಅಥವಾ ಕೃಷಿ, ತೋಟಗಾರಿಕೆ ಇಲಾಖೆಗೆ ನಷ್ಟದ ಕಾರಣದೊಂದಿಗೆ ಅರ್ಜಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು
ನಮೂದಿಸಿ ರೈತರು ಮಾಹಿತಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಂಟಿ ಕೃಷಿ ನಿರ್ದೇಶಕರಾದ ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment