2
ವಿಟ್ಲ: ಹೋಂಡಾ ಆಕ್ಟಿವಾ ಸವಾರನೋರ್ವ ಓವರ್ ಟೇಕ್ ಮಾಡುವ ಭರದಲ್ಲಿ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯೊಂದು ಆಗಸ್ಟ್ 08ರಂದು ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ.
ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬರುತ್ತಿದ್ದ ಜೀಪಿಗೆ ಆಕ್ಟಿವಾ ಡಿಕ್ಕಿ ಹೊಡೆದಿತ್ತು.ಅಪಘಾತದಲ್ಲಿ ಗಾಯಗೊಂಡಿದ್ದ ಅಲಂಗಾರ್ ನಿವಾಸಿ ದಿನೇಶ್(40) ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದ್ಯೋಯುವ ವೇಳೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.
