Home » CWG 2022 : ಟೇಬಲ್ ಟೆನಿಸ್ ಹಾಗೂ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಒಲಿದ ಚಿನ್ನ

CWG 2022 : ಟೇಬಲ್ ಟೆನಿಸ್ ಹಾಗೂ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಒಲಿದ ಚಿನ್ನ

0 comments

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಬಂಗಾರದ ಬೇಟೆ ಮುಂದುವರೆದಿದೆ. ಇದೀಗ ಟೇಬಲ್ ಟೆನಿಸ್ ನಲ್ಲಿ ಪುರುಷರ ಸಿಂಗಲ್ಸ್ ಫೈನಲ್ಸ್ ನಲ್ಲಿ ಅಚಂತಾ ಶರತ್ ಕಮಲ್ ಅವರು ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಹಾಗೆಯೇ ಬ್ಯಾಡ್ಮಿಂಟನ್ ನಲ್ಲಿ ಪುರುಷರ ಡಬಲ್ಸ್ ನಲ್ಲಿ ಭಾರತದ ಸಾತ್ವಿಕ್ ಸಾಯಿ ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಫೈನಲ್ ನಲ್ಲಿ ಚಿನ್ನ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ 21ನೇ ಚಿನ್ನವನ್ನು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬಂದಂತೆ ಆಗಿದೆ.

ಟೇಬಲ್ ಟೆನಿಸ್ ನಲ್ಲಿ ಪುರುಷರ ಸಿಂಗಲ್ಸ್ ಫೈನಲ್ಸ್ ನಲ್ಲಿ ಅಚಂತಾ ಶರತ್ ಕಮಲ್ ಚಿನ್ನಕ್ಕೆ ಮುತ್ತಿಟ್ಟರೆ, ಭಾರತದ ಜ್ಞಾನಶೇಖರನ್ ಸತ್ಯನ್ ಅವರು ಕಂಚಿನ ಪದಕ ಗೆದ್ದಿದ್ದಾರೆ.

ಮೊದಲು ಭಾರತದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿ.ವಿ ಸಿಂಧು ಅವರು ಸ್ವರ್ಣ ಪದಕ ಗೆದ್ದಿದ್ದರು. ಈ ಮೂಲಕ ಐತಿಹಾಸಿಕ ದಾಖಲೆಯನ್ನು ಬರೆದಿದ್ದರು. ಇದರ ಬೆನ್ನಲ್ಲೇ ಇದೀಗ ಕಾಮನ್ ವೆಲ್ತ್ ಗೇಮ್ಸ್ ನ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಭಾರತದ ಲಕ್ಷ್ಯ ಸೇನ್ಮಲೇಷ್ಯಾದ ಎದುರಾಳಿ ಕ್ರೀಡಾಪಟುವನ್ನು ಸೋಲಿಸಿ ಬಂಗಾರವನ್ನು ಗೆದ್ದಿದಾರೆ.

You may also like

Leave a Comment