Home » ಮಹಿಳೆಯರ ಮುಂದೆ ಖಾಸಗಿ ಅಂಗ ಪ್ರದರ್ಶನ ಮಾಡಿದ ವ್ಯಕ್ತಿ: ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ!!!

ಮಹಿಳೆಯರ ಮುಂದೆ ಖಾಸಗಿ ಅಂಗ ಪ್ರದರ್ಶನ ಮಾಡಿದ ವ್ಯಕ್ತಿ: ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿದ ಜನ!!!

by Mallika
0 comments

ಮಹಿಳೆಯರು, ಯುವತಿಯರ ಮುಂದೆ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಆಕ್ರೋಶಿತಗೊಂಡ ಇಲ್ಲೊಂದು ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯೊಂದು ನಡೆದಿದೆ. ಈ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಕಜ್ಜಿ ಗ್ರಾಮದಲ್ಲಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬ ದಿನವೂ ಮಹಿಳೆಯರು, ಯುವತಿಯರ ಕಂಡ ಕೂಡಲೇ ಬೆತ್ತಲಾಗುತ್ತಿದ್ದ. ಅಷ್ಟು ಮಾತ್ರವಲ್ಲದೇ ತನ್ನ ಖಾಸಗಿ ಅಂಗವನ್ನು ಅವರ ಮುಂದೆ ಪ್ರದರ್ಶಿಸುತ್ತಿದ್ದ. ಇದರಿಂದ ರೋಸಿ ಹೋದ ಜನರು ಆತನಿಗೆ ಹಲವು ಬಾರಿ ಎಚ್ಚರಿಕೆ ಕೂಡಾ ನೀಡಿದ್ದರು.

ಶನಿವಾರ ಗ್ರಾಮದ ಇಬ್ಬರು ವ್ಯಕ್ತಿಗಳು ಆತನನ್ನು ಥಳಿಸಿ, ಖಾಸಗಿ ಅಂಗಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಆ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದ. ಬಳಿಕ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಂತ್ರಸ್ತನ ಸ್ಥಿತಿ ಗಂಭೀರವಾಗಿದೆ. ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತ ಮಾನಸಿಕ ರೋಗಿ ಎಂದು ಹೇಳಲಾಗಿದೆ.

You may also like

Leave a Comment