Home » ಕರ್ನಾಟಕ ಹೈಕೋರ್ಟ್ ನಲ್ಲಿ ಉದ್ಯೋಗವಕಾಶ | 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್ ನಲ್ಲಿ ಉದ್ಯೋಗವಕಾಶ | 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

by Mallika
0 comments

ಕರ್ನಾಟಕ ಉಚ್ಚ ನ್ಯಾಯಾಲಯ 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 17, 2022 ರಿಂದ ಸೆಪ್ಟೆಂಬರ್ 17, 2022ರೊಳಗೆ ಅರ್ಜಿಯನ್ನು ಹಾಕಬಹುದು.

ಹುದ್ದೆಗಳ ವಿವರ : ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ ಹೌಸ್ ಕೀಪಿಂಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಇತರೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ, 2ಬಿ, 3ಎ ಅಥವಾ 3ಬಿ ಗೆ ಸೇರಿದ ಅಭ್ಯರ್ಥಿಗಳ ವಯಸ್ಸು ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರಿದ ಪಕ್ಷದಲ್ಲಿ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಯು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 100/- ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಸೆಪ್ಟೆಂಬರ್ 21, 2022ರೊಳಗೆ ಪಾವತಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

You may also like

Leave a Comment