Home » ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ | ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ ಉತ್ತೀರ್ಣರಾಗಲು ಕೊನೆಯ ದಿನಾಂಕ ಪ್ರಕಟ

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ | ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ ಉತ್ತೀರ್ಣರಾಗಲು ಕೊನೆಯ ದಿನಾಂಕ ಪ್ರಕಟ

by Mallika
0 comments

ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ರ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ ಇನ್ನಿತರೆ ಎಲ್ಲಾ ಅಭ್ಯರ್ಥಿಗಳು ಡಿ.31ರೊಳಗಾಗಿ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ.

ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ ಮತ್ತು ಸರ್ಕಾರವು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲವೆಂದು ಸ್ಪಷ್ಟಪಡಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮುಂದಾಗಬಹುದಾದ ಅನಾನುಕೂಲಗಳನ್ನು ತಪ್ಪಿಸುವ ದೃಷ್ಟಿಯಿಂದ ಪರೀಕ್ಷೆ ಪಡೆಯದಿರುವ ಬಳ್ಳಾರಿ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಪ್ರತಿ ಶನಿವಾರ ಮತ್ತು ಭಾನುವಾರ ನಡೆಯಲಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಡಿ.31ರೊಳಗಾಗಿ ಉತ್ತೀರ್ಣರಾಗಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment